ನಮ್ಮ ಬಗ್ಗೆ

 

ನಮ್ಮ ಧ್ಯೇಯ

 

         ಮಂಡ್ಯ ಜಿಲ್ಲಾ ಪೊಲೀಸ್ ಆದ ನಾವು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ  ನಿರಂತರವಾಗಿ ಪ್ರಯತ್ನಿಸುತ್ತಿದ್ದು ಆರಕ್ಷಕ ವ್ಯವಸ್ಥೆಯಲ್ಲಿ  ಸಾರ್ವಜನಿಕರನ್ನು ಪಾಲುದಾರನ್ನಾಗಿಸಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಶ್ರಮವಹಿಸುತ್ತೇವೆ. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಯನ್ನು  ಗಮನದಲ್ಲಿಡುವುದರ ಜೊತೆಗೆ  ಅಪರಾಧ ತಡೆ ಮತ್ತು ಅಪರಾಧ ಪತ್ತೆಯ ಕಾರ್ಯದಲ್ಲಿ ನಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನಿಸುತ್ತೇವೆ.        ಮಂಡ್ಯ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ  ಪೊಲೀಸ್ ಇಲಾಖೆ ನ್ಯಾಯಸಮ್ಮತವಾದ, ಯಾವ ಅಂಜಿಕೆಗೂ ಒಳಗಾಗದೆ, ನಿಶ್ಪಕ್ಷಪಾತ  ನಿಸ್ವಾರ್ಥತೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಜಿಲ್ಲೆಯ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಅನುಕೂಲವಾಗುವಂತೆ ಸಾರ್ವಜನಿಕರಲ್ಲಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ನಿರಂತರವಾಗಿ ಪ್ರಯತ್ನಿಸುತ್ತೇವೆ. ಅಪರಾಧಗಳನ್ನು ತಡೆಗಟ್ಟುವಲ್ಲಿ ಮತ್ತು ಪತ್ತೆಹಚ್ಚುವಲ್ಲಿ, ವಿಭಿನ್ನ ಸಮುದಾಯಗಳ ನಡುವೆ ಸಾಮರಸ್ಯವನ್ನು ಹಾಗೂ ಕೋಮುಸೌಹಾರ್ದತೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಹಾಗೂ ಭಯೋತ್ಪಾದನೆ, ಸಂಘಟಿತ ಅಪರಾಧ ಹಾಗೂ ಸಾಮಾಜಿಕ ವಿರೋಧಿ ಚಟುವಟಿಕೆಗಳ ವಿರುದ್ಧ ದೃಢವಾದ ಸಂಕಲ್ಪವನ್ನು ತಾಳಿ, ಬಲವಾದ ಕಾನೂನನ್ನು ನಿರ್ಭೀತಿಯಿಂದ ಜಾರಿಗೊಳಿಸುತ್ತೇವೆ.        ದುರ್ಬಲರು ಹಾಗೂ ಮಹಿಳೆಯರು, ಅಲ್ಪಸಂಖ್ಯಾತರು ಹಾಗೂ ಹಿರಿಯ ನಾಗರಿಕರು, ಕೊಳೆಗೇರಿ ನಿವಾಸಿಗಳು, ಸಮಾಜದ ಬಡ ಇತರೆ ಶೋಷಿತ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ರಕ್ಷಿಸುವ ಜೊತೆಗೆ ತೊಂದರೆಗೀಡಾದ ಪ್ರತಿಯೊಬ್ಬ ನಾಗರಿಕರಿಗೂ ನಾವು ಪ್ರೀತಿಯಿಂದ ಸಹಾನೂಭೂತಿಯಿಂದ ಪ್ರತಿಕ್ರಿಯೆ ನೀಡುತ್ತೇವೆ.        ಇಲಾಖೆಯಲ್ಲಿ ಸಮಗ್ರತೆಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಏಕತೆಯಿಂದ ಕರ್ತವ್ಯ ನಿರ್ವಹಿಸಿ ನಮ್ಮ ಕಾರ್ಯವೈಖರಿಯಲ್ಲಿ ಪಾರದರ್ಶಕತೆಯನ್ನು ತರುವಲ್ಲಿ, ವೃತ್ತಿಪರ ಕೌಶಲ್ಯತೆಗಳನ್ನು ವೃದ್ಧಿಗೊಳಿಸುವಲ್ಲಿ ಸದಾ ಪ್ರಯತ್ನಿಸುತ್ತೇವೆ.

 

ಪೊಲೀಸ್‌ ವರಿಷ್ಠಾಧಿಕಾರಿಗಳು

 

ಶ್ರೀ ಪರಶುರಾಮ.ಕೆ, ಐಪಿಎಸ್‌

ಇತ್ತೀಚಿನ ನವೀಕರಣ​ : 09-08-2019 07:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಡ್ಯ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ